ಕ್ಯಾಂಪಸ್ ಫ್ರಂಟ್‌ನಿಂದ ಮಾದಕ ದ್ರವ್ಯ ವಿರೋಧಿ ಕಾರ್ಯಕ್ರಮ
Wednesday, January 25th, 2012
ಪುತ್ತೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯಾದ್ಯಂತ ನಡೆಸುತ್ತಿರುವ ಮಾದಕ ದ್ರವ್ಯ ವಿರೋಧಿ ಅಭಿಯಾನದ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಪುತ್ತೂರು ವಲಯದ ವತಿಯಿಂದ ಜ.21ರಂದು ಪುತ್ತೂರಿನ ಬೃಂದಾವನ ಹಾಲ್‌ನಲ್ಲಿ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನುಕ್ಯಾಂಪಸ್ ಫ್ರಂಟ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ತುಫೈಲ್ ಕೆ.ಎಂ. ವಹಿಸಿದ್ದರು. ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾಧ್ಯಕ್ಷ ಇಕ್ಬಾಲ್ ಬೆಳ್ಳಾರೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಪುತ್ತೂರಿನ ಖ್ಯಾತ ವಕೀಲ ಮಜೀದ್ ಖಾನ್ ಮಾದಕ ದ್ರವ್ಯಗಳಿಂದುಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಸಹೀರ್ ಬನ್ನೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
A neo social movement for a new India of equal rights to all Indians

















































